ಪೆರುವಾಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಗ್ರಾಮಸ್ಥರಿಂದ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ

ಪೆರುವಾಜೆ ಗ್ರಾಮ ಪಂಚಾಯತ್ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ರವರ ಅಧ್ಯಕ್ಷತೆಯಲ್ಲಿ ಮಾ.11 ರಂದು ಪೆರುವಾಜೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.
ಸುಳ್ಯ ಸಹಾಯಕ ತೋಟಗಾರಿಕಾ ಅಧಿಕಾರಿ ವಿಜೇತ್ ನೋಡೆಲ್ ಅಧಿಕಾರಿಯಾಗಿದ್ದರು.
ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿ,ವರದಿ ಮಂಡಿಸಿದರು.


ಸಿಬ್ಬಂದಿ ಜಯಲಕ್ಷ್ಮೀ ಪ್ರಾರ್ಥಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಶಹಿನಾಜ್, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.