ಬೆಳ್ಳಾರೆ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ, ಸನ್ಮಾನ

0

ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ನೇತೃತ್ವದಲ್ಲಿ ಗ್ರಾಮಸ್ನೇಹಿ ಸಂಜೀವಿನಿ ಒಕ್ಕೂಟ ಪೆರುವಾಜೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ, ಭಾವೈಕ್ಯ ಮಹಿಳಾ ಮಂಡಲ ಪೆರುವಾಜೆ ಮತ್ತು ಧನಲಕ್ಷ್ಮೀ ಗೊಂಚಲು ಸಮಿತಿ ಇವುಗಳ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಮಾ. 14ರಂದು ಪೆರುವಾಜೆ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.


ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಅಧ್ಯಕ್ಷ ಪಿ. ವಿಠಲ್ ಶೆಟ್ಟಿ ಪೆರುವಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಜಿಲ್ಲೆ 317ಡಿ ಇದರ ಪ್ರಾಂತ್ಯಾಧ್ಯಕ್ಷೆ ಶ್ರೀಮತಿ ರೇಣುಕಾ ಸದಾನಂದ ಜಾಕೆ ಕಾರ್ಯಕ್ರಮ ಉದ್ಘಾಟಿಸಿದರು.

ಪೆರುವಾಜೆ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಪೂಜಾರಿ, ಪೆರುವಾಜೆ ಗ್ರಾಮ ಸ್ನೇಹಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವನಿತಾ, ಉಪಾಧ್ಯಕ್ಷೆ, ಧನಲಕ್ಷ್ಮಿ ಗೊಂಚಲಿನ ಸದಸ್ಯೆ ಶ್ರೀಮತಿ ಪೂರ್ಣಿಮಾ ಉಮೇಶ್ ಎನ್.ಕೆ, ಸುಳ್ಯ ಮಹಿಳಾ ಮಕ್ಕಳ ಅಭಿವೃದ್ಧಿ ಕೇಂದದ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ, ಪೆರುವಾಜೆ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಸಹನಾಝ್ ಅತಿಥಿಗಳಾಗಿ ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ದಯಾನಂದ ನಾಯ್ಕ್ ಪೆರುವಾಜೆ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಅನಸೂಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿ ಶ್ರೀಮತಿ ಜಯಲಕ್ಷ್ಮಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ನಿವೃತ್ತ ಶಿಕ್ಷಕಿ ಶ್ರೀಮತಿ ವಿಜಯಕುಮಾರಿಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ವತಿಯಿಂದ ಪೆರುವಾಜೆ ಅಂಗನವಾಡಿ ಕೇಂದ್ರಕ್ಕೆ ಕುಡಿಯುವ ನೀರಿನ ಟ್ಯಾಂಕ್ ಖರೀದಿಗೆ ದೇಣಿಗೆಯನ್ನು ಶ್ರೀಮತಿ ರೇಣುಕಾ ಸದಾನಂದ ಜಾಕೆ ನೀಡಿದರು. ದಯಾನಂದ ಪೆರುವಾಜೆ ವಂದಿಸಿದರು.