ಕೆ ವಿ ಜಿ ಪಾಲಿಟೆಕ್ನಿಕ್: ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಚಟುವಟಿಕೆಗಳ ಉದ್ಘಾಟನೆ

0

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಚಾಲನೆ ನೀಡಿದರು. ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ, ವಿದ್ಯಾರ್ಥಿ ಆಪ್ತ ಸಮಾಲೋಚಕ ರಂಗಸ್ವಾಮಿ , ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಸಲಹೆಗಾರ ರವಿ ಎಂ ಆರ್ , ಸಂಘದ ಅಧ್ಯಕ್ಷ ಶೋಭಿತ್, ಕಾರ್ಯದರ್ಶಿ ಅಶ್ವತ್, ಉಪಾಧ್ಯಕ್ಷ ಚೇತನ್, ಕೋಶಾಧಿಕಾರಿ ನಿಶ್ಚಿತಾ ಮೊದಲಾದವರು ಉಪಸ್ಥಿತರಿದ್ದರು. ಸುಶ್ಮಿತಾ ಸ್ವಾಗತಿಸಿ ಅರ್ಪಿತಾ ವಂದಿಸಿದರು. ಧನುಷ್ ಕಾರ್ಯಕ್ರಮ ನಿರೂಪಿಸಿದರು.