ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

0

ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶಾಲೆಯ ಪಾತ್ರ ಪ್ರಮುಖ – ಡಾ. ಸುಧೀರ್ ರಾಜ್

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಸಮಾಜ ಮತ್ತು ಶಾಲೆಯ ಪಾತ್ರ ಮಹತ್ವವಾದದ್ದು. ಇಂದಿನ ತಾಂತ್ರಿಕ ಯುಗದಲ್ಲಿ ಜ್ಞಾನ ಒಂದು ಶಕ್ತಿ. ವಿದ್ಯಾರ್ಥಿಗಳು ಜ್ಞಾನವನ್ನು ಗಳಿಸಿ ಭವಿಷ್ಯದಲ್ಲಿ ಶಿಸ್ತು ಬದ್ಧ ಜೀವನವನ್ನು ನಡೆಸಿ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಬೇಕು. ಇದಕ್ಕೆ ಶಾಲೆಯೇ ಭದ್ರ ಬುನಾದಿ ಹಾಕುವುದೆಂದು ಜಸ್ಟೀಸ್ ಕೆ.ಎಸ್. ಹೆಗ್ಡೆ ವಿದ್ಯಾಸಂಸ್ಥೆಯ ಜನರಲ್ ಮ್ಯಾನೇಜ್ಮೆಂಟ್ ವಿಭಾಗದ ಪ್ರೊಫೆಸರ್ ಡಾ. ಸುಧೀರ್ ರಾಜ್ ಕೆ ಹೇಳಿದರು. ಅವರು ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಬೀಳ್ಕೊಡುಗೆ ಕಾರ್ಯಕ್ರಮವನ್ನು
ದೀಪ ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲಾ‌ ಸಂಚಾಲಕರಾದ ಎಂ.ಪಿ. ಉಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲೆ ಕು. ದೇಚಮ್ಮ ಟಿ.ಎಂ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಹತ್ತನೇ ತರಗತಿ ವಿದ್ಯಾರ್ಥಿಗಳಾದ ಧನುಷ್ ರಾಮ್ ಮತ್ತು ಕು. ಸ್ತುತಿ ಭಟ್ ಅನಿಸಿಕೆ ವ್ಯಕ್ತಪಡಿಸಿದರು. ಹೆತ್ತವರ ಪರವಾಗಿ ಶ್ರೀಮತಿ ಮಧುಯತೀನ್ ಅಭಿಪ್ರಾಯ ವ್ಯಕ್ತಪಡಿಸಿದರು. ಕು. ಆಜ್ಞಾ ಬಿ. ರೈ ಅತಿಥಿಯವರನ್ನು ಪರಿಚಯಿಸಿದರು. 10 ನೇ ತರಗತಿ ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು. ಕು. ಮೇಧಾ ನಾರಾಯಣ ಭಟ್ ವಂದಿಸಿದರು.