ಮಹಿಳಾ ದಿನಾಚರಣೆ ಪ್ರಯುಕ್ತ ಬಂಟರ ಮಹಿಳಾ ಘಟಕದಿಂದ

0

ಮಾ.20ರಂದು ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ

ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘ ಮಹಿಳಾ ಘಟಕ ವತಿಯಿಂದ ಜುಲೇಖಾ ಯೇನೇಪೋಯ ಇನ್ ಸ್ಟಿಟ್ಯೂಟ್ ಆಫ್ ಅಂಕೋಲಜಿ ಯೇನೇಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ ಮಂಗಳೂರು ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗಾಗಿ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ ಮಾ.20ರಂದು ಸುಳ್ಯದ ಕೇರ್ಪಳ ಬಂಟರ ಭವನದಲ್ಲಿ ನಡೆಯುವುದು.

ಈ ಶಿಬಿರವು ಸಾರ್ವಜನಿಕರಿಗೆ ಮುಕ್ತವಾಗಿದ್ದು ಈ ಉಚಿತ ತಪಾಸಣಾ ಶಿಬಿರದ ಪ್ರಯೋಜನ ಪಡೆದು ಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.