ಆಲೆಟ್ಟಿ ಕಸ್ತೂರಿ ಬಾ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆ

0

ಆಲೆಟ್ಟಿ ಕಸ್ತೂರಿ ಬಾ ಮಹಿಳಾ ಮಂಡಲದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು
ಮಾ.16 ರಂದು ಆಚರಿಸಲಾಯಿತು. ಮಹಿಳಾ ಮಂಡಲದ ಅಧ್ಯಕ್ಷೆ ಯಶೋಧ ಕುಡೇಕಲ್ಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಮಧುಮತಿ ಬೊಳ್ಳೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ವೀಣಾ ವಸಂತ ಆಲೆಟ್ಟಿ, ಪಂಚಾಯತ್ ಸದಸ್ಯೆ ಮೀನಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಮುಖ್ಯಶಿಕ್ಷಕಿ ಶ್ರೀಮತಿ ಯಶೋಧ ಗುಂಡ್ಯ ರವರನ್ನು ಗೌರವಿಸಲಾಯಿತು. ಶಾರದಾ ಹಾರ್ಕಜೆ ಪ್ರಾರ್ಥಿಸಿದರು. ಸುಂದರಿ ಮೊರಂಗಲ್ಲುಸ್ವಾಗತಿಸಿದರು. ಜಲಜಾಕ್ಷಿ ಆಲೆಟ್ಟಿ ಸನ್ಮಾನ ಪತ್ರವಾಚಿಸಿದರು. ಚಂದ್ರಾವತಿ ಕುಡೆಕಲ್ಲು ವಂದಿಸಿದರು. ಮಹಿಳೆಯರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಜಾನಕಿ ಮೈಂದೂರು ಕಾರ್ಯಕ್ರಮದ ನಿರೂಪಿಸಿದರು. ಆಗಮಿಸಿದ ಎಲ್ಲರಿಗೂ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.