ಮಾ.22: ಕೊಡಗು ಸಂಪಾಜೆಗೆ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್, ಸಂಸದ ಪ್ರತಾಪ್ ಸಿಂಹ ಭೇಟಿ

0

ಪೆರಾಜೆ – ಚೆಂಬು ಕೊಡಗು ಸಂಪಾಜೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿ

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನೂತನ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯ್ಕೆಯಾಗಿದ್ದು, ಅವರು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರೊಂದಿಗೆ ಮಾ.22ರಂದು ಬೆಳಿಗ್ಗೆ ಕೊಡಗು ಸಂಪಾಜೆಗೆ ಆಗಮಿಸಲಿದ್ದು, ಅಲ್ಲಿ ಪೆರಾಜೆ – ಚೆಂಬು ಹಾಗೂ ಕೊಡಗು ಸಂಪಾಜೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಕಾರ್ಯ ಆರಂಭಿಸಲಿರುವ ಅವರು ಆ ಬಳಿಕ ಸಂಪಾಜೆಗೆ ಆಗಮಿಸಿ, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ಸಂಸದ ಪ್ರತಾಪ್ ಸಿಂಹ, ವಿರಾಜಪೇಟೆ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಮಡಿಕೇರಿ ಮಾಜಿ ಶಾಸಕ ಅಪ್ಪಚ್ಚು ರಂಜನ್, ವಿಧಾನಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಸುನಿಲ್ ಸುಬ್ರಮಣಿ, ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಪ್ರಮುಖರಾದ ಎಸ್. ಜಿ. ಮೇದಪ್ಪ, ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸಹಸಂಚಾಲಕ ರಾಬಿನ್ ದೇವಯ್ಯ ಸೇರಿದಂತೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿಯ ಮುಖಂಡರುಗಳು ಉಪಸ್ಥಿತರಿರಲಿದ್ದಾರೆ.