ಸುಳ್ಯ ಬಿಜೆಪಿ ಕಛೇರಿಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

0

ಸುಳ್ಯದಲ್ಲಿ ಬಿಜೆಪಿ ಚುನಾವಣಾ ಕಛೇರಿ ಉದ್ಘಾಟನೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಮಾ.20ರಂದು ಬೆಳಿಗ್ಗೆ ಸುಳ್ಯದ ಬಿಜೆಪಿ ಕಛೇರಿಗೆ ಆಗಮಿಸಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಅವರು ಚುನಾವಣಾ ಕಛೇರಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ, ಚುನಾವಣಾ ಸಂಚಾಲಕ ಹರೀಶ್ ಕಂಜಿಪಿಲಿ, ವಿಧಾನಸಭಾ ಕ್ಷೇತ್ರದ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ರವೀಂದ್ರ, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಜಿಲ್ಲಾ ಕಾರ್ಯದರ್ಶಿ ವಿನಯ್ ಮುಳುಗಾಡು, ಯತೀಶ್ ಅರ್ವಾರ್, ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ವಿನಯ್ ಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಎಸ್. ಎನ್. ಮನ್ಮಥ , ಎ.ವಿ. ತೀರ್ಥರಾಮ ಸೇರಿದಂತೆ ಬಿಜೆಪಿ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.