ಮಾ. 20: ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಭಜನಾ ಮಂಗಳೋತ್ಸವ, ಅರ್ಧ ಏಕಹಾ ಭಜನೆ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಫೆ. 2ರಂದು ಆರಂಭವಾದ 48 ದಿವಸಗಳ ನಿತ್ಯ ಸಂಧ್ಯಾ ಭಜನಾ ಸಂಕೀರ್ತನೆಯ ಮಂಗಳೋತ್ಸವ ಮತ್ತು ಅ
ಅರ್ಧ ಏಕಹಾ ಭಜನೆ ಇಂದು ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಬೆಳಿಗ್ಗೆ 6.00 ಗಂಟೆಗೆ ದೀಪ ಪ್ರಜ್ವಲನೆ ಬಳಿಕ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ, ಸಂಜೆ 6.00 ಗಂಟೆಗೆ ಭಜನಾ ಮಂಗಳೋತ್ಸವ ನಡೆಯಲಿದೆ. ರಾತ್ರಿ ಶ್ರೀ ದೇವಿಯ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.