ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

0

ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಇಂದು ಭೇಟಿ ನೀಡಿ ನೀಡಿದರು.


ಶ್ರೀಧಾಮ ಮಾಣಿಲದ ಸ್ವಾಮೀಜಿ ಮೋಹನದಾಸ ಪರಮಹಂಸ ಸ್ವಾಮೀಜಿ ಚೌಟರಿಗೆ ಶಾಲು ಹಾಕಿ ಆಶೀರ್ವದಿಸಿದರು. ದೇವಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕಿ ಕು. ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರು, ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮತ್ತು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.