ದಿ.ಪ್ರವೀಣ್ ನೆಟ್ಟಾರು ಮನೆಗೆ ಕ್ಯಾ.ಬ್ರಿಜೇಶ್ ಚೌಟ ಭೇಟಿ – ಪುತ್ಥಳಿಗೆ ಮಾಲಾರ್ಪಣೆ

0

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿ ಪ್ರವೀಣ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಎಸ್‌.ಎನ್‌. ಮನ್ಮಥ, ವೆಂಕಟ್ ದಂಬೆಕೋಡಿ, ಚಂದ್ರಶೇಖರ ಪನ್ನೆ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.