ಕೊಡಗು ಸಂಪಾಜೆ: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಭೇಟಿ

0

ಮೈಸೂರು ಅರಸರು ಈ ಹಿಂದೆ ಮಾಡಿದ ಕೆಲಸವನ್ನು ಈಗ ಕೇಂದ್ರ ಸರ್ಕಾರ ಮಾಡುತ್ತಿದೆ: ಯದುವೀರ್ ಒಡೆಯರ್

ಪೆರಾಜೆ – ಚೆಂಬು ಕೊಡಗು ಸಂಪಾಜೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿ

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನೂತನ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಮ್ಮುಖದಲ್ಲಿ ಕೊಡಗು ಜಿಲ್ಲಾ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ಪೆರಾಜೆ – ಚೆಂಬು ಹಾಗೂ ಕೊಡಗು ಸಂಪಾಜೆ ಬಿಜೆಪಿ ಕಾರ್ಯಕರ್ತರ ಸಭೆಯು ಸಂಪಾಜೆಯ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಮಾ‌.22ರಂದು ನಡೆಯಿತು.

ಬೆಳಿಗ್ಗೆ ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಕೊಡಗು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಳಿಕ ಸಂಪಾಜೆಗೆ ಆಗಮಿಸಿ, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.

ಬಳಿಕ ಮಾತನಾಡಿದ ಯದುವೀರ್ ಒಡೆಯರ್ ಅವರು ಮೈಸೂರು ಸಂಸ್ಥಾನಕ್ಕೂ ಅವಿನಾಭಾವ ಸಂಬಂಧವಿದೆ. ಮೈಸೂರು ಅರಸರು ಈ ಹಿಂದೆ ರಾಜರ ಆಳ್ವಿಕೆಯ ಸಂದರ್ಭದಲ್ಲಿ ಮಾಡಿದ ಕೆಲಸವನ್ನು ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಕೌಶಲ್ಯಾಭಿವೃದ್ಧಿ ಭಾರತದ ಮೂಲಕ ಮಾಡುತ್ತಿದೆ. ಮೈಸೂರಿನಲ್ಲಿರುವ ನನ್ನ ಕಛೇರಿ ಅದು ಜನಸಾಮಾನ್ಯರ ಕಛೇರಿಯಾಗಿದ್ದು, ಎಲ್ಲರಿಗೂ ಅಲ್ಲಿಗೆ ಮುಕ್ತ ಅವಕಾಶವಿದೆ ಎಂದು ಹೇಳಿದರು.

ವಿರಾಜಪೇಟೆ ಮಾಜಿ ಶಾಸಕ ಕೆ‌.ಜಿ. ಬೋಪಯ್ಯ, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಡಿಕೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿದರು.

ವೇದಿಕೆಯಲ್ಲಿ ಮಾಜಿ ಶಾಸಕ ಕೆ‌.ಜಿ‌. ಬೋಪಯ್ಯ, ಮಡಿಕೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಡಿಕೇರಿ ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಕಾಫಿ ಬೋರ್ಡ್ ಸದಸ್ಯ ಕಿಶೋರ್ ತಳೂರು, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎ‌ನ್.ಸಿ. ಅನಂತ ಊರುಬೈಲು, ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ, ಕೊಡಗು ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ. ಲೋಕೇಶ್, ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಶ್ರೀಮತಿ ರೀನಾ ಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಕಾಂಗೀರ ಸತೀಶ್, ಮಡಿಕೇರಿ ನಗರಸಭಾ ಅಧ್ಯಕ್ಷೆ ಶ್ರೀಮತಿ ಅನಿತಾ ಪೂವಯ್ಯ ಉಪಸ್ಥಿತರಿದ್ದರು. ನಾಗೇಶ್ ಕುಂದಲ್ಪಾಡಿ ಸ್ವಾಗತಿಸಿ, ಕೊ.ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರಮಾದೇವಿ ಕಳಗಿ ವಂದಿಸಿದರು.