ಕಲ್ಲುಗುಂಡಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತ್ಯು

0

ಕಳೆದ ವಾರ ಕೊಡಗು ಸಂಪಾಜೆ ಗ್ರಾಮದ ಕಲ್ಲುಗುಂಡಿ ಮೇಲಿನ ಪೇಟೆಯಲ್ಲಿ ರಸ್ತೆ ಬದಿಯಲ್ಲಿರುವ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.

ದ.ಕ. ಸಂಪಾಜೆ ಗ್ರಾಮದ ಚೆಡಾವಿನ ಲೋಹಿತ್ ಪೂಜಾರಿ ಎಂಬವರು ಬೈಕ್ ಅಪಘಾತ ಸಂಭವಿಸಿದ ಪರಿಣಾಮವಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆನ್ನಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ, ಮಾ.22ರಂದು ಸಂಜೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.ಅವರಿಗೆ 42 ವರ್ಷ ವಯಸ್ಸಾಗಿತ್ತು.