ಕೇರಳದಲ್ಲಿ 2 ಸಾವಿರ ರೂ ಮುಖಬೆಲೆಯ ಕೋಟಿಗಟ್ಟಲೆ ಖೋಟಾ ನೋಟು ಪತ್ತೆ

0

ಸುಳ್ಯದ ಸುಲೈಮಾನ್ ಹಾಗೂ ಪೆರಿಯಾ ನಿವಾಸಿ ಅಬ್ದುಲ್ ರಜಾಕ್ ಪೊಲೀಸರ ವಶಕ್ಕೆ

ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು‌ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಸುಳ್ಯದ ಸುಲೈಮಾನ್ ಹಾಗೂ ಪೆರಿಯಾ ನಿವಾಸಿ ಅಬ್ದುಲ್ ರಜಾಕ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರಕರಣದಲ್ಲಿ ಪುತ್ತೂರಿನ ವ್ಯಕ್ತಿ ಓರ್ವರ ಕೈವಾಡ ಇರುವುದು ತನಿಖೆ ವೇಳೆ ಪೊಲೀಸರಿಗೆ ತಿಳಿದು ಬಂದಿದೆ ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.