ಸಂಪಾಜೆ: ಕಡೆಪಾಲದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಟೆಂಪೊ

0

ಮಳೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ದ.ಕ. ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ಮಾ.23ರಂದು ಸಂಜೆ ಸಂಭವಿಸಿದೆ.

ಸುಳ್ಯದಿಂದ ಮಡಿಕೇರಿಯ ಕಡೆಗೆ ತೆರಳುತ್ತಿದ್ದ ಗೂಡ್ಸ್ ಟೆಂಪೋ ಮಳೆಯ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದು, ವಾಹನ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.