ನಿಷ್ಪಕ್ಷಪಾತ ಚುನಾವಣೆಗೆ ಸಹಕರಿಸಿ : ಡಾ|| ಚೂಂತಾರು

0

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡುವ ವಿಶಿಷ್ಟ ಅವಕಾಶ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯಂತ ಮಹತ್ವದ ಮತ್ತು ಪಾವಿತ್ರ್ಯತೆ ಇರುತ್ತದೆ. ಈ ಕಾರಣದಿಂದ ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಡಳಿತ ಯಂತ್ರ ಶ್ರಮಿಸುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆ ಗೃಹರಕ್ಷಕರು ಸೇರಿ ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ ನ್ಯಾಯಯುತವಾಗಿ, ಕಾನೂನು ಬದ್ಧವಾಗಿ ನಡೆಸಲು ಬದ್ಧರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಗೃಹರಕ್ಷಕರಿಗೆ ಚುನಾವಣೆ ಕರ್ತವ್ಯ ಅತ್ಯಂತ ಮಹತ್ವದ್ದಾಗಿರುತ್ತದೆ. ಎಲ್ಲಾ ಗೃಹರಕ್ಷಕರು ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸಬೇಕಾಗಿದೆ ಎಂದು ದ.ಕ. ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀಮೋಹನ್ ಚೂಂತಾರು ನುಡಿದರು.

ದಿನಾಂಕ ೨೭/೦೩/೨೦೨೪ ರಂದು ದ ಕ ಜಿಲ್ಲಾ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಬೆಳ್ಳಾರೆ ಗ್ರಹರಕ್ಷಕ ದಳದ ಕಛೇರಿಗೆ ಭೇಟಿ ನೀಡಿ ಚುನಾವಣಾ ಪೂರ್ವ ಸಿದ್ದತಾ ಸಭೆ ನಡೆಸಿದರು.ಮತ್ತು ಪಾರದರ್ಶಕ ಚುನಾವಣೆ ನಡೆಸಲು ಜಿಲ್ಪಾಡಳಿತದ ಜೊತೆ ಸಹಕರಿಸಲು ಆದೇಶಿಸಿದರು.ಈ ಸಂದರ್ಭದಲ್ಲಿ ಬೆಳ್ಳಾರೆ ಘಟಕದ ಘಟಕಾಧಿಕಾರಿ ವಸಂತ್ ಕುಮಾರ್ ಹಾಗೂ ೨೦ ಗ್ರಹರಕ್ಷಕರು ಉಪಸ್ಥಿತರಿದ್ದರು.