ದೊಡ್ಡಡ್ಕ: ಗಾಂಜಾ ಸೇವನೆ, ಇಬ್ಬರು ಯುವಕರ ಬಂಧನ

0

ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಗಾಂಜಾ ಸೇವನೆ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಬಂಧಿಸಿರುವ ಪೊಲೀಸರು ಮಾರ್ಚ್ 26 ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

ಗೂನಡ್ಕದ ದೊಡ್ಡಡ್ಕ ಪರಿಸರದಲ್ಲಿ ಗಸ್ತಿನಲ್ಲಿದ್ದ ಪೊಲೀಸರಿಗೆ ರಸ್ತೆ ಬದಿಯಲ್ಲಿ ಇಬ್ಬರು ಯುವಕರು ಅನುಮಾನಾಸ್ಪಂದವಾಗಿ ಕಂಡುಬಂದಿದ್ದು ವಿಚಾರಿಸಿದಾಗ ಗಾಂಜಾ ಸೇವನೆ‌ ಮಾಡಿರುವ ಬಗ್ಗೆ ದೃಢಪಟ್ಟಿದೆ.

ಈ ಬಗ್ಗೆ ಇಬ್ಬರನ್ನು ಬಂಧಿಸಿದ ಪೊಲೀಸರು ಸುಳ್ಯ ಠಾಣೆಗೆ ಕರೆತಂದು ತನಿಖೆಗೆ ಒಳಪಡಿಸಿದಾಗ ಸತ್ಯ ವಿಚಾರ ಬೆಳಕಿಗೆ ಬಂದಿದೆ. ಬಂಧಿತರನ್ನು ಸಂಪಾಜೆ ಗ್ರಾಮದ ಕಡಪಾಲ ನಿವಾಸಿ ಸಫಾನ್ ಮತ್ತು ಅರಂತೋಡು ಗ್ರಾಮದ ತನುಷ್ ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ಧವೂ ಪೊಲೀಸ್ ಠಾಣೆಯಲ್ಲಿ ಕಲಂ 27 (ಬಿ) NDPS ಕಾಯ್ದೆಯಂತೆ ಅಪರಾಧ ಎಸಿಗಿರುವುದರಿಂದ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.