ಜಾಲ್ಸೂರು: ಕಾರು – ಬೈಕ್ ಅಪಘಾತ – ಬೈಕ್ ಸವಾರನಿಗೆ ಗಾಯ

0

ಕಾರು ಹಾಗೂ ಬೈಕಿನ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಜಾಲ್ಸೂರು ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮಾ.28ರಂದು ರಾತ್ರಿ ಸಂಭವಿಸಿದೆ.

ಜಾಲ್ಸೂರಿನ ಕದಿಕಡ್ಕದ ಬಾಲಚಂದ್ರ ಎಂಬವರು ತಮ್ಮ ಬೈಕ್ ನಲ್ಲಿ ಜಾಲ್ಸೂರು ಪೇಟೆಯ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಮುಂಭಾಗದಿಂದ ಅತೀ ವೇಗವಾಗಿ ಬಂದ ಕಾರು ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಬಾಲಚಂದ್ರ ಅವರಿಗೆ ಹಾಗೂ ಕಾರಿನಲ್ಲಿದ್ದ ಓರ್ವ ಮಹಿಳೆಗೆ ಗಾಯಗೊಂಡಿದ್ದು, ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.