ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಾಣಿಲ ಶ್ರೀಗಳ ಸಮ್ಮುಖದಲ್ಲಿ ಅಭಿವೃದ್ಧಿ ಕುರಿತು ಸಭೆ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಮಾ. 29ರಂದು ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಸೇರಿದಂತೆ ಎರಡೂ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಸಭೆಯಲ್ಲಿ ಭಾಗವಹಿಸಿದ್ದರು. ದೇವಸ್ಥಾನದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ಸಂಗ್ರಹಕ್ಕಾಗಿ ಗ್ರಾಮ ಮತ್ತು ನೆರೆಯ ಗ್ರಾಮಗಳಿಗೆ ಭೇಟಿ ನೀಡುವ ಉದ್ದೇಶದಿಂದ ವಲಯ ಸಮಿತಿಗಳನ್ನು ರಚಿಸುವುದೆಂದು ಸಭೆಯಲ್ಲಿ ನಿರ್ಣಯಿಸಲಾಯಿತು.