ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ರಂಜಿನಿ ಮೊಟ್ಟೆಮನೆಯವರಿಂದ ನಾಮಪತ್ರ ಸಲ್ಲಿಕೆ

0

ದ.ಕ. ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಅಭ್ಯರ್ಥಿ ರಂಜಿನಿ ಮೊಟ್ಟೆಮನೆಯವರು ಮಾ. ೩೦ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಅವರ ಜೊತೆ ಜಿಲ್ಲಾ ಉಸ್ತುವಾರಿ ಪ್ರವೀಣ್ ಪಿರೇರಾ, ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ, ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಮಂಗಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿತಾ ರೆಸಾರಿಯೋ ಇದ್ದರು.