ಗಾಂಧಿನಗರದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಪರಾರಿ

0


ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆರೋಪಿ ಪರಾರಿಯಾದ ಘಟನೆ ಸುಳ್ಯದ ಗಾಂಧಿನಗರದಲ್ಲಿ ಸಂಭವಿಸಿದೆ.


ಸುಳ್ಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ವಿಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ಯುವಕ ಪರಾರಿಯಾಗಿದ್ದಾನೆ.


ಮನೆಯಲ್ಲಿ ೧೬ ವರ್ಷದ ಯುವತಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಯುವಕ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಘಟನೆಯ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಮನೆಯವರು ದೂರು ನೀಡಿದ್ದು, ಪೊಲೀಸರು ಘಟನೆಯ ಮನೆಯ ಪಕ್ಕದ ಕೆಲ ಯುವಕರನ್ನು ವಿಚಾರಣೆಗೆ ಒಳಪಡಿಸಿ ಸ್ಥಳಿಯ ಸಿಸಿ ಕ್ಯಾಮರಾ ಪರಿಶೀಲಿಸಲಾಗುತ್ತಿದ್ದು ತನಿಖೆ ಮುಂದುವರಿಯುತ್ತಿದೆ ಎಂದು ತಿಳಿದು ಬಂದಿದೆ.