ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಒಡೆಯರ್ ನಾಮಪತ್ರ ಸಲ್ಲಿಕೆ

0

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎ.3ರಂದು ಬೆಳಿಗ್ಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಮೈಸೂರಿನ ಅರಮನೆ ಬಳಿಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಜಿಲ್ಲಾಧಿಕಾರಿ ಕಛೇರಿಯ ವರೆಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರುಗಳು ಹಾಗೂ ಸಾವಿರಾರು ಮಂದಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಾಗಿದ ಯದುವೀರ್ ಒಡೆಯರ್ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ, ಸಂಸದ ಪ್ರತಾಪ್ ಸಿಂಹ, ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಚುನಾವಣಾ ಉಸ್ತುವಾರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಶಾಸಕ ಟಿ.ಎಸ್. ಶ್ರೀವತ್ಸ, ಜೆಡಿಎಸ್ ಶಾಸಕ ಹರೀಶ್ ಗೌಡ, ವಿರಾಜಪೇಟೆ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರುಗಳು ಹಾಗೂ ಸಾವಿರಾರು ಮಂದಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.