ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ನಾಮಪತ್ರ ಸಲ್ಲಿಕೆ

0

ಸಿ.ಎಂ. ಸಿದ್ಧರಾಮಯ್ಯ, ಡಿ.ಸಿ.ಎಂ.‌ ಡಿ.ಕೆ. ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರ ಉಪಸ್ಥಿತಿ

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಲಕ್ಷ್ಮಣ್ ಅವರು ಪಕ್ಷದ ಮುಖಂಡರು ಹಾಗೂ ಸಾವಿರಾರು ಮಂದಿ ಕಾರ್ಯಕರ್ತರ ಜೊತೆ ಮೆರವಣಿಗೆಯ ಮೂಲಕ ಸಾಗಿ ಎ.3ರಂದು ಅಪರಾಹ್ನ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಡಿಕೇರಿ ಶಾಸಕ ಮಂಥರ್ ಗೌಡ, ಶಾಸಕರಾದ ವೆಂಕಟೇಶ್, ತನ್ವೀರ್ ಸೇಟ್, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಹುಣಸೂರು ಮಾಜಿ ಶಾಸಕ ಮಂಜುನಾಥ್, ಸೇರಿದಂತೆ ಮೈಸೂರು ಹಾಗೂ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರುಗಳು, ಸಾವಿರಾರು ಮಂದಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮೊದಲು ನಡೆದ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ಉಪಸ್ಥಿತರಿದ್ದು, ಮಾತನಾಡಿದರು.