p>

ಸುಳ್ಯ ನ್ಯಾಯಾಲಯದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದ ಸೋಮಶೇಖರ್ ಎ ರವರಿಗೆ ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿ

0

ಸುಳ್ಯ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಹಿರಿಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಪ್ರಧಾನ ಸಿವಿಲ್ ಹಿರಿಯ ಶ್ರೇಣಿಯ ನ್ಯಾಯಾಧೀಶರಾಗಿ ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದ ಸೋಮಶೇಖರ್ ಎ ರವರು ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿಗೊಂಡಿದ್ದಾರೆ.

ಅವರು ಸುಳ್ಯ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭ ಜನಸ್ನೇಹಿ ಅಧಿಕಾರಿಯಾಗಿ ಸಾರ್ವಜನಿಕ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಕಾನೂನು ಅರಿವು ಕಾರ್ಯಕ್ರಮಗಳ ಮೂಲಕ ಸುಳ್ಯ ತಾಲೂಕಿನಾದ್ಯಂತ ಸಂಚರಿಸಿ ವಿವಿಧ ಕಾನೂನು ಮಾಹಿತಿ ಶಿಬಿರವನ್ನು ಆಯೋಜಿಸಿ ಜನಜಾಗೃತಿಯನ್ನು ಮೂಡಿಸಿದ್ದರು. ಅವರ ಅವಧಿಯಲ್ಲಿ ಸುಳ್ಯ ಹಿರಿಯ ನ್ಯಾಯಾಲಯದ ವಿವಿಧ ಸಿವಿಲ್ ಪ್ರಕರಣಗಳಿಗೆ ಶಿಕ್ಷೆಗಳನ್ನು ಪ್ರಕಟಿಸಿದ್ದರು.