ಬೆಳ್ಳಾರೆ: ಮತದಾನ ಜಾಗೃತಿ ಅಭಿಯಾನ

0

ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ, ಡಾ. ಶಿವರಾಮ ಕಾರಂತ ಪದವಿಪೂರ್ವ ಕಾಲೇಜು ಹಾಗೂ ಗ್ರಾಮ ಪಂಚಾಯತ್ ಪೆರುವಾಜೆ ಇವರ ಜಂಟಿ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನ ಎ. 8ರಂದು ನಡೆಯಿತು. ಬೆಳ್ಳಾರೆ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಬಳಿಯಿಂದ ಮುಖ್ಯರಸ್ತೆಯಲ್ಲಿ ಸಾಗಿ ಪೆರುವಾಜೆಯಲ್ಲಿ ಪ್ರಮಾಣವಚನ ದೊಂದಿಗೆ ಅಭಿಯಾನ ಸಮಾಪನ ಗೊಂಡಿತು. ಅಭಿಯಾನದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ನೋಡಲ್ ಅಧಿಕಾರಿಗಳು ಭಾಗವಹಿಸಿದರು.