ಗಾಂಧಿನಗರ ಕೆಪಿಎಸ್: ಪಿಯುಸಿ ಕಲಾ ವಿಭಾಗ ಮತ್ತು ವಿಜ್ಞಾನ ವಿಭಾಗದಲ್ಲಿ ಶೇ. 100 – ವಾಣಿಜ್ಯ ವಿಭಾಗದಲ್ಲಿ ಶೇ. 93

0

ಸುಳ್ಯ ಗಾಂಧಿನಗರದ ಕೆಪಿಎಸ್ ಪಿಯುಸಿ ವಿಭಾಗದ ಫಲಿತಾಂಶ ಪ್ರಕಟಗೊಂಡಿದ್ದು, ಕಲೆ ಮತ್ತು ವಿಜ್ಞಾನ ವಿಭಾಗದಲ್ಲಿ ಶೇಕಡ 100 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 93% ಲಭಿಸಿದೆ.

ಒಟ್ಟು 48 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 47 ಮಂದಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ರಾಜೇಶ 567 ಅಂಕ ಪಡೆದು ಕಾಲೇಜಿಗೆ ಪ್ರಥಮ ಸಾನಿಯಾಗಿದ್ದು, ಫಾತಿಮತ್ ಜಾಯಿದಾ 560 ಅಂಕಗಳಿಸಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ. ಫಾತಿಮತ್ ತಂಬ್ರಿನ 467 ಅಂಕಗಳಿಸಿ ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಒಟ್ಟು ಏಳು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.