ಪಂಜ ದೇವಳಕ್ಕೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಭೇಟಿ

0


ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯಕ್ಕೆ ಏ.11 ರಂದು ದ.ಕ.ಜಿಲ್ಲಾ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಯವರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಇದೇ ವೇಳೆ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಮಹೇಶ್ ಕುಮಾರ್ ಕರಿಕ್ಕಳ ,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ರೈ ಬಳ್ಪ , ಸತ್ಯನಾರಾಯಣ ಭಟ್ ಕಾಯಂಬಾಡಿ, ಶ್ರೀಮತಿ ಮಾಲಿನಿ ಕುದ್ವ, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರಜಿತ್ ಭಟ್ ಪಂಜಬೀಡು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.