ಸುಳ್ಯ ತಾಲೂಕು ಯೋಜನಾಧಿಕಾರಿಯಾಗಿ ಮಾಧವ ಉಜಿರೆ ಕರ್ತವ್ಯಕ್ಕೆ ಹಾಜರು

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕಿಗೆ ಯೋಜನಾಧಿಕಾರಿಯಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಿಂದ ವರ್ಗಾವಣೆಗೊಂಡ ಮಾಧವ ರವರು ಎ. 12 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ಸುಳ್ಯ ಯೋಜನಾಧಿಕಾರಿ ನಾಗೇಶ್ ಪಿ ಯವರು ಭದ್ರಾವತಿಗೆ ವರ್ಗಾವಣೆಗೊಂಡಿದ್ದು ತೆರವಾದ ಸ್ಥಾನಕ್ಕೆ ಮಾಧವ ರವರು ಬಂದಿರುತ್ತಾರೆ.

ಇವರು ಕಳೆದ 21 ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ವಿವಿಧ ಹುದ್ದೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆಯವರು.