ನಾಳೆ ಎ.17: ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮತಪ್ರಚಾರ

0

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಳೆ ಎ.17ರಂದು ಇಡೀ ದಿನ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಬೆಳಿಗ್ಗೆ ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರಕ್ಕೆ ಭೇಟಿ ನೀಡಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರು ಬಳಿಕ ಮಂಡೆಕೋಲು ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗುವ ಬಿಜೆಪಿ ಕಾರ್ಯಕರ್ತರುಗಳ ಸಭೆಯಲ್ಲಿ ಮಾತನಾಡಲಿದ್ದಾರೆ.

ಬಳಿಕ ಕೆವಿಜಿ ಕ್ಯಾಂಪಸ್ ಭೇಟಿ ನೀಡಲಿರುವ ಅವರು ಅಲ್ಲಿಂದ ಅರಂತೋಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯುವ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ಜಾತ್ರೋತ್ಸವವದ ಸಡಗರದಲ್ಲಿರುವ ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.

ಅಲ್ಲಿಂದ ಹಿರಿಯ ಬಿಜೆಪಿ ಕಾರ್ಯಕರ್ತ ಬಿ.ಕೆ. ಬೆಳ್ಯಪ್ಪ ಗೌಡ ಕಡ್ತಲ್ ಕಜೆ ಅವರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಲಿದ್ದಾರೆ.

ಅಪರಾಹ್ನ ಹರಿಹರಪಲ್ಲತ್ತಡ್ಕದಲ್ಲಿ ನಡೆಯಲಿರುವ ಹರಿಹರಪಲ್ಲತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು ಭಾಗದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮತಯಾಚನೆ ನಡೆಸಲಿದ್ದಾರೆ. ಬಳಿಕ ಕುಲ್ಕುಂದ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.

ಸಾಯಂಕಾಲ ಕಡಬ ತಾಲೂಕಿನ ಕೊಂಬಾರು ಗ್ರಾಮದ ಬೋಳ್ನಡ್ಕದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮತಯಾಚನೆ ಮಾಡಲಿದ್ದು, ಬಳಿಕ ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಇಚ್ಲಂಪಾಡಿ ಶ್ರೀ ಉಳ್ಳಾಲ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಕೊನೆಯದಾಗಿ ಗೋಳಿತೊಟ್ಟು ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ಜರುಗಲಿರುವ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.