ಸಂಪಾಜೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಪಾದಯಾತ್ರೆ ಮೂಲಕ ಮತಯಾಚನೆ

0

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸಂಪಾಜೆಯಲ್ಲಿ ಪಾದಯಾತ್ರೆಯ ಮೂಲಕ ಎ.19ರಂದು ಮತಯಾಚನೆ ನಡೆಸಿದರು.

ಬಳಿಕ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ ಸ್ವಾಗತಿಸಿದರು.

ಅಭ್ಯರ್ಥಿ ಪದ್ಮರಾಜ್ ಅವರು ಮಾತನಾಡಿ ಕಾಂಗ್ರೆಸ್ ಪಕ್ಷ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡುವುದರ ಮೂಲಕ ಬಡಜನರಿಗೆ ಸಹಾಯ ಮಾಡಿದೆ. ಬಿಜೆಪಿಗೆ ಈಗಾಗಲೇ ಸೋಲಿನ ಭೀತಿ ಪ್ರಾರಂಭಗೊಂಡಿದ್ದು, ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದು, ಬಡಜನರಿಗೆ ಅನ್ಯಾಯ ಮಾಡಿದೆ. ಉದ್ಯೋಗ ಸೃಷ್ಠಿಸುವಲ್ಲಿಯೂ ಬಿಜೆಪಿ ವಿಫಲವಾಗಿದ್ದು, ಈ ಬಾರಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದ್ದು, ಜಿಲ್ಲೆಯಲ್ಲಿ ಜನರು ಸಾಮರಸ್ಯದ ಜೀವನ ನಡೆಸುವಂತೆ ಮಾಡುವುದೇ, ನನ್ನ ಗುರಿ. ಚುನಾವಣೆಗೆ ಮುಂದೆ ಕೆಲವೇ ದಿನಗಳು ಬಾಕಿಯಿದ್ದು, ಕಾರ್ಯಕರ್ತರು ಹಗಲಿರುಳು ದುಡಿದು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿತುಂಬುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ ಕಲ್ಲುಗುಂಡಿ ಕಾಂಗ್ರೆಸ್ ಪಕ್ಷಕ್ಕೆ ಬಂಡೆಯಿದ್ದಂತೆ. ಸುಳ್ಯದಲ್ಲಿ ಪಕ್ಷ ಸೋತಾಗಲೂ ಕಲ್ಲುಗುಂಡಿ ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ತೋರಿಸಿಕೊಟ್ಟಿದೆ. ಈ ಬಾರಿ ಕಾಂಗ್ರೆಸ್ ಪರವಾದ ಅಲೆ ಜಿಲ್ಲೆಯಲ್ಲಿ ಇದ್ದು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವ ಸಾಧಿಸಲಿದ್ದಾರೆ ಎಂದು ಹೇಳಿದರು.

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಅಮರನಾಥ ಅವರು ಮಾತನಾಡಿ ಕಾಂಗ್ರೆಸ್ ಪಂಚ ಗ್ಯಾರಂಟಿ ಜನತೆಗೆ ನೀಡಿದ್ದು, ಜನರು ಮತ ನೀಡುವ ಮೂಲಕ ಕಾಂಗ್ರೆಸ್ ಗೆ ಆಶೀರ್ವಾದ ಮಾಡಬೇಕು. ಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ಸಹಕಾರ ನೀಡಿದ್ದು, ಪದ್ಮರಾಜ್ ಅವರಿಗೆ ಈ ಬಾರಿ ಮತದಾರರು ಗ್ಯಾರಂಟಿ ಆಶೀರ್ವಾದ ಮಾಡಲಿದ್ದಾರೆ ಎಂದರು.

ವೇದಿಕೆಯಲ್ಲಿ ಮಾಜಿ ಸಚಿವ ಬಿ. ರಮನಾಥ ರೈ, ದ‌.ಕ. ಜಿಲ್ಲಾ ಕಾಂಗ್ರೆಸ್ ಧ್ಯಕ್ಷ ಹರೀಶ್ ಕುಮಾರ್ , ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಅಮರನಾಥ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಪಿ.ಸಿ. ಜಯರಾಮ, ಗೇರುನಿಗಮದ ಅಧ್ಯಕ್ಷೆ ಶ್ರೀಮತಿ ಮಮತ ಗಟ್ಟಿ, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕಾಂಗ್ರೆಸ್ ಮುಖಂಡರಾದ ಜಿ. ಕೃಷ್ಣಪ್ಪ, ಟಿ.ಎಂ. ಶಹೀದ್, ವೆಂಕಪ್ಪ ಗೌಡ, ನಿತ್ಯಾನಂದ ಮುಂಡೋಡಿ, ಎಂ.ಎಸ್. ಮಹಮ್ಮದ್, ಜಿ.ಕೆ. ಹಮೀದ್, ವಹಿದಾ ಇಸ್ಮಾಯಿಲ್, ಎಸ್.ಕೆ. ಹನೀಫ್, ಅಬೂಸಾಲಿ ಗೂನಡ್ಕ, ಕಿರಣ್ ಬುಡ್ಲೆಗುತ್ತು, ಮಹಮದ್ ಕುಂಞಿ ಗೂನಡ್ಕ, ಶ್ರೀಮತಿ ಗೀತಾ ಕೋಲ್ಚಾರ್ , ಕೆ.ಪಿ. ಜಾನಿ ಕಲ್ಲುಗುಂಡಿ, ವಸಂತ ಪೆಲ್ತಡ್ಕ, ಎ.ಕೆ. ಇಬ್ರಾಹಿಂ, ಶೌವಾದ್ ಗೂನಡ್ಕ, ಯಮುನ ಬಿ.ಎಸ್., ಸುಂದರಿ ಮುಂಡಡ್ಕ, ಕಾಂತಿ ಬಿ.ಎಸ್., ಲೂಕಾಸ್ ಟಿ., ಲಿಸ್ಸಿ ಮೊನಾಲಿಸಾ, ರಾಜು ನೆಲ್ಲಿಕುಮೇರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.