ಜಾಲ್ಸೂರಿನಲ್ಲಿ ಪಾದಾಚಾರಿ ಮಹಿಳೆಗೆ ಸ್ಕೂಟಿ ಡಿಕ್ಕಿ , ಗಂಭೀರ ಗಾಯ

0

ಜಾಲ್ಸೂರು ಸಮೀಪ ಮಾಣಿ ಮೈಸೂರು ಹೆದ್ದಾರಿಯಲ್ಲಿ ಪಾದಾಚಾರಿ ಮಹಿಳೆಗೆ ಸ್ಕೂಟಿ ಡಿಕ್ಕಿಯಾಗಿ ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಇಂದು ಸಂಜೆ ನಡೆದಿದೆ.
ಮೂವರು ಮಹಿಳೆಯರು ರಸ್ತೆ ದಾಟುತ್ತಿದ್ದ ಸಂದರ್ಭ ಇದೇ ರಸ್ತೆಯಲ್ಲಿ ಬಂದ ಸ್ಕೂಟಿ ಚಾಲಕ ನಿಯಂತ್ರಣ ತಪ್ಪಿ ಮಹಿಳೆಯ ಕಾಲಿಗೆ ಡಿಕ್ಕಿ ಹೊಡೆದಿದ್ದು ಘಟನೆಯಿಂದ ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.
ಸ್ಥಳೀಯರು ಮಹಿಳೆಯನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.