ಸುಳ್ಯ ನಗರದ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ತೆರಳಿ ಕಾಂಗ್ರೆಸ್ ಮತಯಾಚನೆ

0

ಸುಳ್ಯ ನಗರದ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಏಪ್ರಿಲ್ 22 ರಂದು ಸಂಜೆ ಮತಯಾಚನೆ ಹಾಗೂ ಪ್ರಚಾರ ಕಾರ್ಯ ನಡೆಸಿದರು.

ಸುಳ್ಯ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಂ ವೆಂಕಪ್ಪ ಗೌಡರ ನೇತೃತ್ವದಲ್ಲಿ ಮತಯಾಚನೆ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್ ಪದ್ಮರಾಜ್ ಪೂಜಾರಿಯವರಿಗೆ ಮತ ನೀಡುವಂತೆ ಮತದಾರರಲ್ಲಿ ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕೆ ಎಂ ಮುಸ್ತಫ ಜನತಾ, ಆಮ್ ಆದ್ಮಿ ಪಕ್ಷದ ಮುಖಂಡ ಕಲಂದರ್ ಎಲಿಮಲೆ, ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ರಿಯಾಜ್ ಕಟ್ಟಿಕಾರ್ಸ್,ನಾಮನಿರ್ದೇಶಕ ಸದಸ್ಯ ಸಿದ್ದೀಕ್ ಕೊಕ್ಕೋ, ಮುಖಂಡರುಗಳಾದ ಭವಾನಿ ಶಂಕರ್ ಕಲ್ಮಡ್ಕ, ಶಶಿಧರ ಎಂ ಜೆ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಿದ್ದರು.