ಲೋಕಸಭಾ ಚುನಾವಣೆಯ ಹಿನ್ನೆಲೆ; ಕೆ.ಎಸ್.ಆರ್.ಟಿ.ಸಿ.ಬಸ್ ಸಂಚಾರ ವ್ಯತ್ಯಯ

0


ಎ.26ರಂದು ನಡೆಯುವ ಲೋಕಸಭಾ ಚುನಾವಣೆಯ ಕರ್ತವ್ಯ ನಿಮಿತ್ತ ಕೆ.ಎಸ್.ಆರ್.ಟಿ.ಸಿ.ಬಸ್ ಸಂಚಾರ ವ್ಯತ್ಯಯವಾಗಲಿದೆ ಎಂದು ಕೆ.ಎಸ್.ಆರ್.ಟಿ.ಸಿ.ಸುಳ್ಯ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮತ ಪೆಟ್ಟಿಗೆ ಮತ್ತು ಸಿಬ್ಬಂದಿಗಳನ್ನು ಮತಗಟ್ಟೆಗಳಿಗೆ ಸಾಗಿಸುವ ಸಲುವಾಗಿ ಕೆ.ಎಸ್.ಆರ್.ಟಿ.ಸಿ. ಬಸ್ ಗಳನ್ನು ನಿಯೋಜಿಸಿರುವುದರಿಂದ ಎ 25,26,27 ರಂದು ಗ್ರಾಮಾಂತರ ಪ್ರದೇಶಗಳಿಗೆ ಬಸ್ ಸಂಚಾರ ವ್ಯತ್ಯಯವಾಗಬಹುದೆಂದು ತಿಳಿಸಿದ್ದಾರೆ.