ಬೆಳ್ಳಾರೆ ಪೊಲೀಸ್ ಠಾಣೆಗೆ ವಿದ್ಯಾರಶ್ಮಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರದ ಕೊಡುಗೆ

0

ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಗೆ ಸುಮಾರು 40,000/- ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು.

ಕಾಲೇಜಿನ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು ಠಾಣಾಧಿಕಾರಿ ಸಂತೋಷ್ ಬಿ. ಪಿ.ಯವರಿಗೆ ಯಂತ್ರವನ್ನು ಹಸ್ತಾಂತರಿಸಿದರು. ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮತ್ತು ಠಾಣಾ ಸಿಬ್ಬಂದಿಯವರು ಉಪಸ್ಥಿತರಿದ್ದರು.