ಕೋಲ್ಚಾರು- ಕಣಕ್ಕೂರು ಬಳಿ ಚಾಲಕನ ನಿಯಂತ್ರಣ ತಪ್ಪಿ‌ ಲಾರಿ ಪಲ್ಟಿ

0

ಆಲೆಟ್ಟಿ ಗ್ರಾಮದ ಕೋಲ್ಚಾರಿನ ಕಣಕ್ಕೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಎಳನೀರು ತುಂಬಿದ ಲಾರಿಯೊಂದು ಕಂದಕಕ್ಕೆ ಉರುಳಿದ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ.
ಮೈಸೂರಿನಿಂದ ಎಳನೀರು ತುಂಬಿದ ಲಾರಿ ಕೋಲ್ಚಾರು ಮಾರ್ಗವಾಗಿ ಕೇರಳದ ಕಡೆಗೆ ಸಂಚರಿಸುತ್ತಿದ್ದ ವೇಳೆಯಲ್ಲಿ ಘಟನೆ ಸಂಭವಿಸಿದೆ. ಲಾರಿಯಲ್ಲಿ‌ ಚಾಲಕ ಮತ್ತು ಕ್ಲೀನರ್ ಮಾತ್ರ ಇದ್ದು ಅಲ್ಪ‌ ಸ್ವಲ್ಪ ‌ಗಾಯಗಳಿಂದ ಪಾರಾಗಿದ್ದಾರೆ. ಸ್ಥಳೀಯ ಕಣಕ್ಕೂರಿನ ಯುವಕರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದರು.