ಕೆವಿಜಿ ಪಾಲಿಟೆಕ್ನಿಕ್ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ

0

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕರಾಗಿ ಸುಧೀರ್ಘ ಸೇವೆ ಸಲ್ಲಿಸಿ ಎ. 30 ರಂದು ವಯೋ ನಿವೃತ್ತಿ ಹೊಂದಿದ ಶ್ರೀ ವೈ.ವಿ ಪಾಲಚಂದ್ರ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ನಿವೃತ್ತರನ್ನು ಸನ್ಮಾನಿಸಿ ಮಾತನಾಡುತ್ತಾ ಸಂಸ್ಥೆಗೆ ಮತ್ತು ವಿದ್ಯಾರ್ಥಿಗಳಿಗೆ ಸುಧೀರ್ಘ ಸಮಯ ತಮ್ಮ ಜ್ಞಾನವನ್ನು ಧಾರೆಯೆರೆದು ನಿವೃತ್ತಿಯಾಗುತ್ತಿರುವ ಸಿಬ್ಬಂದಿಗಳಿಂದ ಇನ್ನು ಮುಂದೆಯೂ ಅವರ ಅನುಭವ ಲಭ್ಯವಾಗಬೇಕು, ಅ ಮೂಲಕ ಸಂಸ್ಥೆಯೊಂದಿಗಿರುವ ಸಂಬಂಧ ಮುಂದುವರಿಯಬೇಕು ಎಂದು ಹೇಳಿದರು.


ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಎಂ.ಕೆ ಶ್ರೀಧರ್ ವಹಿಸಿದ್ದರು. ಸಮಾರಂಭದಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ, ವಿಭಾಗ ಮುಖ್ಯಸ್ಥೆ ರಮಾದೇವಿ ಹಾಗೂ ಕಚೇರಿ ಅಧಿಕ್ಷಕ ಧನಂಜಯ ಕಲ್ಲುಗದ್ದೆ ಶುಭ ಹಾರೈಸಿದರು.


ಎಲ್ಲಾ ವಿಭಾಗದ ಮುಖ್ಯಸ್ಥರುಗಳು ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಂದ್ರಶೇಖರ ಬಿಳಿನೆಲೆ ಸ್ವಾಗತಿಸಿ ವಂದಿಸಿದರು.