ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯ ಕೆವಿಜಿ ಆಸ್ಪತ್ರೆಗೆ ದಾಖಲು















ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡು, ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾದ ಘಟನೆ ದ.ಕ. ಸಂಪಾಜೆಯಲ್ಲಿ ಮೇ.3ರಂದು ಬೆಳಿಗ್ಗೆ ಸಂಭವಿಸಿದೆ.

ವಿಟ್ಲದ ಅಡ್ಯನಡ್ಕ ದಂಪತಿಗಳು ಕಾರಿನಲ್ಲಿ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಗೋಡೆಗೆ ಢಿಕ್ಕಿ ಹೊಡೆದಿದ್ದು, ಕಾರು ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ ಅವರ ಪತ್ನಿ ಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಸೇರಿ ಎರಡು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.









