ಮೇ.7ರಂದು ಸುಳ್ಯದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

0

ಮೇ.7ರಂದು ಸುಳ್ಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಮೇ.7ರಂದು ಸುಳ್ಯಕ್ಕೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ. ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

ಅರ್ಜಿದಾರರು ನಮೂನೆ | & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವುದು.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು

ಪೊಲೀಸ್ ಅಧೀಕ್ಷಕರ ಕಛೇರಿ

9364062518

ಪೊಲೀಸ್ ಉಪಾಧೀಕ್ಷಕರು-1 ಕಛೇರಿ

9364062579

ಪೊಲೀಸ್ ಉಪಾಧೀಕ್ಷಕರು-2 ಕಛೇರಿ

9364062580.