ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಮೇ.5 ರಂದು ನಡೆಯಿತು.


ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತಡ್ಕ ದವರೆಗೆ ನಡೆಯಿತು.

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಪಂಚಾಯತ್ ಸಿಬ್ಬಂದಿಗಳು, ಐವರ್ನಾಡು ಸಮಗ್ರ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟದ ಎಂಬಿಕೆ, ಎಲ್ ಸಿ ಆರ್ ಪಿ ಹಾಗೂ ಸಖಿಗಳು ಹಾಗೂ ಸದಸ್ಯರು ಹಾಗೂ ಊರಿನ ಪ್ರಮುಖರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಎಲ್ಯಣ್ಣ ಗೌಡ ಕುಳ್ಳಂಪಾಡಿ ರವರು ಲಘು ಉಪಹಾರದ ವ್ಯವಸ್ಥೆ ಮಾಡಿದ್ದರು.