ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯ

0

ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಐವರ್ನಾಡು ಗ್ರಾಮ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಮೇ.02 ರಂದು ನಡೆಸಲಾಯಿತು.ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು.


ಬೇಸಿಗೆ ಶಿಬಿರದ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಶಿಬಿರದ ಪ್ರಯೋಜನವನ್ನು ಗ್ರಾಮೀಣ ಮಕ್ಕಳು ಪಡೆದುಕೊಳ್ಳುವ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ಪರಿಮಳ ಸದಾನಂದ ಪರ್ಲಿಕಜೆ ಇವರು ಗ್ರಾಮ ಪಂಚಾಯತ್ ಗ್ರಂಥಾಲಯದ ಮೂಲಕ ನಡೆದ ಈ ಬೇಸಿಗೆ ಶಿಬಿರದ ಪ್ರಯೋಜನವನ್ನು ಈ ಗ್ರಾಮದ ಹೆಚ್ಚಿನ ಮಕ್ಕಳು ಪಡೆಯುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಕುತ್ಯಾಡಿ ಇವರು ಗ್ರಾಮೀಣ ಮಕ್ಕಳು ಬೇಸಿಗೆ ರಜೆಯನ್ನು ಮನರಂಜನೆಯಾಗಿ ಕಲಿಯಲಿ ಹಾಗೂ ಬೇಸಿಗೆ ಶಿಬಿರದ ಪ್ರಯೋಜನವನ್ನು ಈ ಗ್ರಾಮದ ಹೆಚ್ಚಿನ ಮಕ್ಕಳು ಪಡೆಯುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ನಂತರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಂತಹ ಶ್ರೀಮತಿ ಪರಿಮಳರವರು ಅಭಿನಯ ಗೀತೆಯ ಮೂಲಕ ಮಕ್ಕಳನ್ನು ಹಾಡುತ್ತಾ ಕುಣಿಯುತ್ತಾ ಉತ್ತಮ ರೀತಿಯಲ್ಲಿ ಅಭಿನಯ ಗೀತೆಯನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ
ಪಂಚಾಯತ್ ಅಭಿವೃದ್ಧಿ ಅಧಿಕಾರಿ , ಕಾರ್ಯದರ್ಶಿಯವರು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ರಾಜೀವಿ, ಸಂಜೀವಿನಿ ಸಂಘದ ಎಂ ಬಿ ಕೆ ಪಶುಸಖಿ ಬ್ಯಾಂಕ್ ಸಖಿ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ಪೆರುವಾಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥಿಸಿ, ಗ್ರಂಥಾಲಯ ಮೇಲ್ವಿಚಾರಕರು ಸ್ವಾಗತಿಸಿ ನಿರೂಪಿಸಿದರು. ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ಅಬ್ದುಲ್ ರಹಿಮಾನ್ ವಂದಿಸಿದರು.