ಕೆ.ಎಸ್. ಗೌಡ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್ .ಎಸ್. ಎಲ್.ಸಿ ಯಲ್ಲಿ ಸತತ 4ನೇ ಬಾರಿ ಶೇ. 100 ಫಲಿತಾಂಶ

0

2024ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸತತ 4ನೇ ಬಾರಿ ಶೇ.100 ಫಲಿತಾಂಶ ದಾಖಲಾಗಿದೆ.

ಹಾಜರಾದ 13 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಉತ್ತೀರ್ಣರಾಗಿರುತ್ತಾರೆ.

ನೇಹಾ.ಬಿ 592 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿ , ಶ್ರುತಿ ರೈ 544 ಅಂಕಗಳೊಂದಿಗೆ ದ್ವಿತೀಯ ಸ್ಥಾನಿ ಹಾಗೂ ಭವಿಷ್ಯ. ಪಿ 535 ಅಂಕಗಳೊಂದಿಗೆ ತೃತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.