ನಾಳೆ ಪೆರುವಾಜೆ ಡಾ. ಶಿವರಾಮ ಕಾರಂತ ಪ್ರ.ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ

0

ಬೆಳ್ಳಾರೆಯ ಪೆರುವಾಜೆ ಡಾ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯು ನಾಳೆ ಮೇ.11ರಂದು ನಡೆಯಲಿದೆ.

ಕಾರ್ಯಕ್ರಮವನ್ನು ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀರಾಮ ಪಾಟಾಜೆ ಅವರು ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ದಾಮೋದರ ಕಣಜಾಲು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾದವ ಗೌಡ ಬೆಳ್ಳಾರೆ, ಮಿಥುನ್ ಶೆಣೈ ಡಾ. ಸಂತೋಷ್ ಡಿಸೋಜ, ದೈಹಿಕ ಶಿಕ್ಷಣ ಶಿಕ್ಷಕ ರವಿಕುಮಾರ್ ಕಿರಿಭಾಗ ಉಪಸ್ಥಿತರಿರಲಿದ್ದಾರೆ. ಅಪರಾಹ್ನ ಸಮಾರೋಪ ಸಮಾರಂಭ ನಡೆಯಲಿದೆ.