ಪೆರಾಜೆ: ಪಾಲಡ್ಕದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ – ಕಾರಿನ ಮಧ್ಯೆ ಅಪಘಾತ

0

ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯ ಆಸ್ಪತ್ರೆಗೆ ದಾಖಲು

ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು, ಆಸ್ಪತ್ರೆಗೆ ದಾಖಲಾದ ಘಟನೆ ಪೆರಾಜೆ ಸಮೀಪದ ಪಾಲಡ್ಕದಲ್ಲಿ ಮೇ.11ರಂದು ಸಂಜೆ ಸಂಭವಿಸಿದೆ.

ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಪಾಲಡ್ಕದಲ್ಲಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕ ಸೇರಿದಂತೆ ಸಹ ಪ್ರಯಾಣಿಕರಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.