ಸಂಪಾಜೆ : ಮಾಣಿ- ಮೈಸೂರು ಹೆದ್ದಾರಿಗೆ ಉರುಳಿದ ಮರ, ಸಂಚಾರ ಅಸ್ತವ್ಯಸ್ತ

0

ಸಂಪಾಜೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರವೊಂದು ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ರಸ್ತೆಯ ಮೇಲ್ಭಾಗದ ಬರೆಯ ಮೇಲಿನಿಂದ ಬೇರು ಸಮೇತ ಕಿತ್ತು ಬಂದ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಘಟನೆಯಿಂದ ಅಲ್ಪಕಾಲ ವಾಹನ ಸವಾರರು ಮತ್ತು ಪ್ರಯಾಣಿಕರಿಗೆ ಸಮಸ್ಯೆ ಉಂಟಾಯಿತು. ಸ್ಥಳೀಯರು ರಸ್ತೆಗೆ ಬಿದ್ದ ಮರ ತೆರವುಕಾರ್ಯ ಮಾಡುತ್ತಿದ್ದಾರೆ ಎನ್ನಲಾಗಿದೆ.