ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಮಠಕ್ಕೆ ರವಿ ಶಾಸ್ತ್ರಿ ಭೇಟಿ

0

ಭಾರತ ತಂಡದ ಮಾಜಿ ಆಟಗಾರ, ಮುಖ್ಯ ಕೋಚ್ ಮತ್ತು ವೀಕ್ಷಕ ವಿವರಣೆಗಾರ ರವಿಶಾಸ್ತ್ರಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೇ.15 ರಂದು ಭೇಟಿ ಮಾಡಿದರು.

ಬಳಿಕ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಮಠಾಧಿಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.

ಶ್ರೀಗಳು ರವಿಶಾಸ್ತ್ರೀ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭ ವೆಂಕಟ್ರಾಜು ಮತ್ತಿತರರು ಉಪಸ್ಥಿತರಿದ್ದರು.