ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಕ್ರೀಡಾಕೂಟ

0

ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಬೆಳ್ಳಿ ಹಬ್ಬವು ಮೇ.26 ರಂದು ನಡೆಯಲಿದ್ದು ಪೂರ್ವ ಭಾವಿಯಾಗಿ ಸಂಘದ ಸದಸ್ಯರಿಗೆ ಕ್ರೀಡಾಕೂಟ ವನ್ನು ಮೇ.19 ರಂದು ಸುಳ್ಯದ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆಸಲಾಯಿತು.


ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ ಯವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು.