ಜಿಲ್ಲಾ ಮಟ್ಟದಲ್ಲಿ ಸ್ಥಾನ ಪಡೆದ ಬೆಳ್ಳಾರೆ ಕೆಪಿಎಸ್ ನ ಪಿಯುಸಿ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

0

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪಿಯುಸಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಸ್ಥಾನ ಪಡೆದಿದ್ದು ಅವರನ್ನು ಜಿಲ್ಲಾಧಿಕಾರಿಗಳು ಸನ್ಮಾನಿಸಿದರು.
ಕಾಲೇಜಿನ ಕಲಾವಿಭಾಗದ ವಿದ್ಯಾರ್ಥಿಗಳಾದ ಫಾತಿಮತ್ ಸುಹೈನಾ ಐ.ಕೆ (579) ಅಂಕ, ಅನುಸೂಯ ಎಂ.(577) ಅಂಕ, ವಾಣಿಜ್ಯ ವಿಭಾಗದ ಭವಿತಾ (562) ಅಂಕ, ವಿಜ್ಞಾನ ವಿಭಾಗದ ಕಾವ್ಯ ಶ್ರೀ (568) ಅಂಕ ಇವರನ್ನು ಇತ್ತೀಚೆಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಂಗಳೂರಿನ ಡಿ.ಸಿ ಬಂಗಲೆಯಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜನಾರ್ಧನ ಕೆ.ಎನ್. ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.