ಮೇ 31 :ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಾಜ್ಯುವೇಶನ್ ಡೇ

0

ಮೇ 31 ರಂದು ಕೆ.ವಿ.ಜಿ, ತಾಂತ್ರಿಕ ಮಹಾವಿದ್ಯಾಲಯದಲ್ಲಿ 2023-24ನೇ ಸಾಲಿನಲ್ಲಿ ಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರಧಾನ (Graduation Day-2024) ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್‌ಮೆನ್ ಕಮಿಟಿ ‘ಬಿ’ ಎ.ಪಿ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯದ Registrar (Evaluation) ಡಾ. ಟಿ.ಎನ್. ಶ್ರೀನಿವಾಸ ಅವರು ಆಗಮಿಸಲಿದ್ದಾರೆ ಹಾಗೂ ಇನ್ನೋರ್ವ ಅತಿಥಿಗಳಾಗಿ ಡಾ. ತಿಪ್ಪೇಸ್ವಾಮಿ ಜಿ ಪ್ರೊಫೆಸರ್ ಹಾಗೂ ಮುಖ್ಯಸ್ಥರು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್, ಬಿ.ಎಂ.ಎಸ್. ಇನ್ಸಿಟಿಟ್ಯೂಟಿ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್, ಬೆಂಗಳೂರು ಇವರು ಆಗಮಿಸಲಿದ್ದಾರೆ. ಈ ಸಮಾರಂಭದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಕಾಲೇಜಿನ ಸಿ.ಇ.ಒ., ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲ ಡಾ. ಸುರೇಶ ವಿ. ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಇವರ ಉಪಸ್ಥಿತಿಯಲ್ಲಿ ತಿಳಿಸಿರುತ್ತಾರೆ.