ಸುಳ್ಯ ಎನ್ನೆoಪಿಯುಸಿಯಲ್ಲಿ ಸಿ ಇ ಟಿ ಸೆಲ್ ಉದ್ಘಾಟನೆ

0

ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿ ಇ ಟಿ, ನೀಟ್, ಜೆ ಇ ಇ ಗೆ ತರಬೇತಿ ನೀಡುವ ಸಿ ಇ ಟಿ ಸೆಲ್ ಮೇ 27ರಂದು ಉದ್ಘಾಟನೆಗೊಂಡಿತು.ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಚಂದ್ರ ಶೇಖರ ಪೇರಾಲು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಪೂರ್ವ ತಯಾರಿ ಯೊಂದಿಗೆ ಸಾಗಿದಾಗ ಯಶಸ್ಸು ಲಭಿಸುತ್ತದೆ ಎಂದರು.ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿಬಿ ಕಾರ್ಯಕ್ರಮ ನಿರೂಪಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.