ಆಲೆಟ್ಟಿ ಪಂಚಾಯತ್ ಮಾಜಿ ಸದಸ್ಯ, ಕಾಂಗ್ರೆಸ್ ಪಕ್ಷದ ಮುಖಂಡ ಕಲ್ಲೆಂಬಿ ಮಾಧವ ಗೌಡ ನಿಧನ

0

ಆಲೆಟ್ಟಿ ಪಂಚಾಯತ್ ಮಾಜಿ ಸದಸ್ಯ ಕಲ್ಲೆಂಬಿ ಮಾಧವ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಅವರು ಮನೆಯಲ್ಲಿ ಇರುವ ಸಂದರ್ಭದಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ದಾರಿ‌ ಮಧ್ಯೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

ಮೃತರು ಪತ್ನಿ ಶ್ರೀಮತಿ ನಾಗವೇಣಿ, ಪುತ್ರರಾದ ಜೀವನ್, ಪುನೀತ್ ಮತ್ತು ಪುತ್ರಿ ಶ್ರೀಮತಿ ಪ್ರೀತಿ,ಅಳಿಯ ಹಾಗೂ ಸಹೋದರರಾದ ಯತೀಶ್ ಕಲ್ಲೆಂಬಿ, ಸತೀಶ್ಚಂದ್ರ ಕಲ್ಲೆಂಬಿ, ಸಹೋದರಿಯರಾದ ಹೇಮಲತಾ, ಪದ್ಮಾವತಿ, ಪ್ರೇಮಲತಾ ,ಹರಿಣಾಕ್ಷಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕರಾಗಿ ಗುರುತಿಸಿಕೊಂಡಿದ್ದರು.
ಆಲೆಟ್ಟಿ ಪಂಚಾಯತ್ ಸದಸ್ಯರಾಗಿ ಒಂದು ಅವಧಿಯಲ್ಲಿ ಸೇವೆ ಸಲ್ಲಿಸಿದ್ದರು.
ಕಲ್ಲೆಂಬಿ ಕುಟುಂಬದ ಆಡಳ್ತೆದಾರರಾಗಿಯೂ ಸೇವೆ ಸಲ್ಲಿಸಿದ್ದರು. ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿಯೂ ಗುರುತಿಸಿಕೊಂಡಿದ್ದರು.